Facebook

Archive for the ‘ಪಂಜು-ವಿಶೇಷ’ Category

ಅಪ್ಪ: ರಾಜುಗೌಡ ನಾಗಮಂಗಲ

ಅಪ್ಪಂದಿರ ದಿನ ಮುಗಿದೇ ಹೋಯ್ತು. ಇನ್ನೂ ಮುಂದಿನ ವರ್ಷವೇ ಅಪ್ಪನನ್ನ ಹಗಲಿಂದ ಇರುಳಿಬ್ಬಾಗವಾಗುವವರೆಗೂ ತಮ್ತಮ್ಮ ಹೆಗಲಿಗೆ ಕಟ್ಟಿಕೊಂಡು ಹೊಗಳುವುದು, ಹಾಡುವುದು ಕವಿತೆ ಬರೆಯುವುದು ಅಲ್ಲೋ ಇಲ್ಲೋ ಓದಿದ ಆದರ್ಶ ಅಪ್ಪಂದಿರ ಬಗ್ಗೆ ಬರೆಯುವುದು ಎಲ್ಲವೂ ಒಂದಷ್ಟು ಈ ವರ್ಷ ಮುಗಿಯಿತು. ಬರೆಯುವುದೇನು ತಪ್ಪಿಲ್ಲ ಓದಿದವ ತನ್ನ ನೆನಪುಗಳನ್ನು ಮೆಲುಕು ಹಾಕುತ್ತಾನೆ, ಅಷ್ಟಕ್ಕೂ ಅಪ್ಪನೆಂದರೆ ದ್ವೇಷವೇನು ಇಲ್ಲಾ. ಜಗತ್ತಿಗೆ ನನ್ನಪ್ಪನನ್ನ ತೋರಿಸುವ ಉಮೇದುವಾರಿಕೇನು ಇಲ್ಲಾ, ನನಗಂತೂ ಅಪ್ಪನೆಂದರೆ ಚಿಪ್ಪೊಡೆಯದ ಮುತ್ತು, ನಾನಾಗ ಚಿಗುರುಗಣ್ಣಿನ ಹುಡುಗ. ಎಸ್. ಎಸ್. ಎಲ್ಸಿ […]

ಅನುವಾದಕ್ಕೊಂದು ತಂತ್ರಜ್ಞಾನ:  ಉದಯ ಶಂಕರ ಪುರಾಣಿಕ

ಬೇರೆ ರಾಜ್ಯ ಅಥವಾ ಬೇರೆ ದೇಶಗಳಲ್ಲಿ ಪ್ರವಾಸ ಮಾಡುವಾಗ, ಸಾಮಾನ್ಯವಾಗಿ ಭಾಷೆಯ ಸಮಸ್ಯೆಯನ್ನು ಎದುರಿಸುತ್ತೇವೆ. ನಮಗೆ ಗೊತ್ತಿರುವ ಭಾಷೆಯಲ್ಲಿ ಮತ್ತೊಬ್ಬರ ಜೊತೆ ಸಂಭಾಷಣೆ ನೆಡೆಸುವುದು ವಿಫಲವಾದಾಗ, ಕೈ, ಬಾಯಿ ಸನ್ನೆಗಳು ಮತ್ತು ನಮ್ಮ ಹಾವ ಭಾವಗಳ ಮೂಲಕ ಸಂಭಾಷಣೆ ನೆಡೆಸುವ ಪ್ರಯತ್ನ ಮಾಡುತ್ತೇವೆ. ಕೆಲವೊಮ್ಮೆ ಇದೂ ವಿಫಲವಾಗುವುದುಂಟು. ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದೆ, ಆದರೆ ಭಾಷೆಯ ಸಮಸ್ಯೆಗೆ ಪರಿಹಾರ ನೀಡಲು ಸಾಧ್ಯವಿಲ್ಲವೇಕೆ ಎನ್ನುವ ಪ್ರಶ್ನೆ ಆಗ ನಮಗೆ ಎದುರಾಗುವುದುಂಟು. ಜಪಾನಿನ ಲಾಗ್‍ಬಾರ್ ಹೆಸರಿನ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಈ […]

ಅಮ್ಮ ಅಂದ್ರೆ ಚಿಕ್ಕ ಚಿಕ್ಕ ಖುಷಿ : ಕೃಷ್ಣ ದೇವಾಂಗಮಠ

ಅಮ್ಮ ಎನ್ನುವವಳು ಜಗತ್ತಿನ ಅದಮ್ಯ ಜ್ಯೋತಿ ಚೇತನ. ಈ ಎರಡಕ್ಷರಗಳಲ್ಲಿ ಸೃಷ್ಟಿಯನ್ನೇ ಮೋಡಿಮಾಡಬಲ್ಲ ಅದೆಂಥದೋ ಶಕ್ತಿ ಇದೆ. ಆ ಶಕ್ತಿ ಅದರ ಉಚ್ಚಾರಣೆಯಿಂದ ಬಂದದ್ದೋ ಅಥವಾ ಆ ಪದದ ಹುಟ್ಟಿನಿಂದ ಬಂದದ್ದೊ ತಿಳಿಯದು ಆದರೆ ಆ ಪದಕ್ಕೆ ಶೋಭೆಯಂತಿರುವ ಆ  ಹೆಣ್ಣು ಮಾತ್ರ ಮಮತೆ, ಪ್ರೀತಿ, ಸಹನೆ, ಕರುಣೆ ಇಂಥ ಹೇಳಲು ಅಸಾಧ್ಯವಾದ ಗುಣ ಭೂಷಿತೆ. ಜಗತ್ತಿನ ಎಲ್ಲರೂ ಇದನ್ನು ಕಂಡುಂಡವರೇ ! ಇವುಗಳೇ ನಮಗೆ ಅವಳನ್ನು ದೈವ ಸ್ವರೂಪಿ ಎನ್ನಲು ಪ್ರೇರಕ ಮತ್ತು ಅಮ್ಮ ಎನ್ನುವ […]

ಕವಿತಾ ಲಹರಿ: ರಾಘವೇಂದ್ರ ತೆಕ್ಕಾರ್

ಬುದ್ದಿ ಭಾವಗಳ ರೂಪಿತ ವಿಸ್ಮಯವನ್ನು ಕವಿತೆ ಎನ್ನುವದೊ? ಪದಗಳ ಜೋಡಣೆಯನ್ನು ಕವಿತೆ ಎನ್ನುವದೊ?ಪರಿಶ್ರಮ, ಕಲಾ ಕೌಶಲ್ಯ, ಪ್ರತಿಭೆಯ ಅನಾವರಣದ ರೂಪಕವನ್ನು ಕವಿತೆಯೆನ್ನುವದೊ?ಕಾಣದರ ಜೊತೆಗೆ ಕಂಡಂತೆ ಮಾತಿಗೆ ನಿಲ್ಲುವ ಕ್ರಿಯೆ ಕವಿತೆಯೊ? ನಮ್ಮೊಳಗಿನ ಭಾವಗಳ ಜೊತೆಗಿನ ಸಂವಾದವೊ? ಕವಿತೆ ಎಂದರೆ ನನ್ನೊಳಗೊ??? ಹೀಗೆ ಹಲವಾರು ಪ್ರಶ್ನೆಗಳ ಸರಮಾಲೆಗೆ ಎಡತಾಕುವದೆ ಕವಿತೆಯೊ?ನನಗಂತು ಕವಿತೆ ಎಂದರೆ ಏನು ಎಂಭ ಪ್ರಶ್ನೆಗೆ ಉತ್ತರ ದೊರಕುತ್ತಿಲ್ಲ. ಬಹುಶಃ ಪ್ರತಿ ಪ್ರಶ್ನೆಗಳು ಕವಿತೆ ಎಂಬುದಕ್ಕೆ ಅರ್ಥ ಕೊಡುತ್ತಿದೆ.ಎಲ್ಲವೂ ಹೌದಾಗಿದ್ದು ಇಲ್ಲದರ ಭಾವಗಳ ಕೂಡುವಿಕೆಯ ಜೊತೆಗಿನ ಸಂವಾದದಲ್ಲಿ […]

ತಾಯಿಯ ಆಶ್ರು ಒರೆಸಿದ ಪದ್ಮಶ್ರೀ ಪುರಸ್ಕೃತ ಮಲ್ಲೇಶಂ: ಉದಯ ಪುರಾಣಿಕ

ಭಾರತ ಜ್ಯೋತಿ ಲೇಖನ ಸರಣಿ : ತೆಲಂಗಾನಾದ ಚಿಂತಕಿಂಡಿ ಮಲ್ಲೇಶಂ, ಹುಟ್ಟಿದ್ದು ತೆಲಂಗಾನಾ ರಾಜ್ಯದಲ್ಲಿರುವ ಪುಟ್ಟ ಹಳ್ಳಿ ಶಾರ್ಜಿಪೇಟೆಯ ಬಡ ನೇಕಾರ ಕುಟುಂಬವೊಂದರಲ್ಲಿ. ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ, ಶಾಲೆಯಲ್ಲಿ 6ನೆ ತರಗತಿ ಓದುವಾಗಲೇ ತನ್ನ ವಿದ್ಯಾಭ್ಯಾಸ ನಿಲ್ಲಿಸಿದ್ದರು. ಆದರೆ ಅವರು ಮಾಡಿರುವ ಸಾಧನೆಗಾಗಿ ದೊರೆತಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗೌರವಗಳನ್ನು ಒಮ್ಮೆ ನೋಡಿ. ಇವರು, ವರ್ಷ 2009ರಲ್ಲಿ ಭಾರತದ ರಾಷ್ಟ್ರಪತಿಗಳಿಂದ ಗೌರವ ಪುರಸ್ಕಾರ, ವರ್ಷ 2016ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಅಮೇಜಿಂಗ್ ಇಂಡಿಯನ್ ಗೌರವ ಪ್ರಶಸ್ತಿ, […]

ತಳಿರು-ತಿಲ್ಲಾನ: ಅನುರಾಧ ಪಿ. ಸಾಮಗ

“ನೋಡಮ್ಮಾ ಆ ಕರು ಅಷ್ಟು ಹೊತ್ತಿಂದ ಅಲ್ಲಿ ಅಂಬೇ ಅಂತ ಕರೆಯುತ್ತಾ ಇತ್ತು. ನಾನು ಗಿಡಕ್ಕೆ ನೀರು ಹಾಕಲಿಕ್ಕೆ ಹೊರಗೆ ಹೋಗಿದ್ದೆನಲ್ಲಾ, ಬಡಬಡಾಂತ ನಮ್ಮ ಗೇಟಿನ ಹತ್ತಿರ ಬಂತು, “ಏನೂ ಇಲ್ಲ ಮುದ್ದೂ” ಅಂದೆ, ತನ್ನಷ್ಟಕ್ಕೆ  ಹೋಯ್ತು. ಎಷ್ಟು ಅರ್ಥ ಆಗುತ್ತೆ ನೋಡಮ್ಮಾ. ಅದೇ ಆ ಕೆಂಪು ಕಣ್ಣಿನ  ದನ ಬಂದಿದ್ದರೆ ಮೊಂಡಾಟ ಮಾಡಿಕೊಂಡು ಇನ್ನೂ ಇಲ್ಲೇ ನಿಂತಿರುತ್ತಿತ್ತು ಅಲ್ವಾ?” ಅಂದಳು ಮಗಳು. ಹೌದಲ್ಲವೇ ಅನ್ನಿಸಿತು.  ನಮ್ಮ ಏರಿಯಾದಲ್ಲಿ ಒಂದಷ್ಟು ದನ ಕಟ್ಟಿಕೊಂಡು ಹಾಲು ಪೂರೈಸುವವನೊಬ್ಬನಿದ್ದಾನೆ. ಪ್ರತಿದಿನ […]

ಯಶೋಧರ ಚರಿತದ ಸಂಕಲ್ಪಹಿಂಸೆಯ ಬಹುರೂಪಗಳು : ದೊರೇಶ ಬಿಳಿಕೆರೆ

      ಜನ್ನನ ಯಶೋಧರ ಚರಿತೆ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಿಭಿನ್ನವಾದ ಕೃತಿ. ಕಾವ್ಯದ ವಸ್ತು ಮತ್ತು ರೂಪದಲ್ಲೂ, ಅಭಿವ್ಯಕ್ತಿಯ ಸ್ವರೂಪದಲ್ಲೂ, ಕಾವ್ಯೋದ್ಧೇಶದಲ್ಲೂ ಇದೊಂದು ಭಿನ್ನ ದಾರಿಯನ್ನೇ ತುಳಿದದೆ. ಸಾಂಪ್ರದಾgಯಿಕ ಜೈನಕಾವ್ಯಗಳಿಗಿಂತಲೂ ಮಿಗಿಲಾಗಿ ಜೀವದಯೆ ಜೈನಧರ್ಮಂ ಅನ್ನುವ ಆಶಯದೊಂದಿಗೆ ಇಡೀ ಕಾವ್ಯ ಕಂದಪದ್ಯಗಳಲ್ಲಿಯೇ ರಚಿತವಾಗಿದೆ. ಬೆರಳೆಣಿಕೆಯಷ್ಟು ವೃತ್ತಗಳಿವೆ. ಸಮಕಾಲೀನ ಸಂದರ್ಭದಲ್ಲಿ ಜರುಗುತ್ತಿದ್ದ ಧಾರ್ಮಿಕ ಮತ್ತು ರಾಜಕೀಯ ಪಲ್ಲಟಗಳಿಂದಾಗಿ ಜನ್ನ ಅನುಸರಿಸಿದ ಮತ ಪ್ರತಿಪಾದನೆಯ ಮಾರ್ಗ ಆ ಕಾಲದ ಸರಿದಾರಿ ಎನಿಸಿತು. ಈ ಕೃತಿಯ ಮತಪ್ರತಿಪಾದನೆಯ ತತ್ವವನ್ನು […]

ಕದ್ದು ತಿನ್ನುವ ರುಚಿ: ಸುನೀತಾ ಕುಶಾಲನಗರ

ನಾನು ಕುಳಿತಿದ್ದ ರೈಲು ಹೊರಡಲು ಇನ್ನೂ ಸಮಯವಿತ್ತು. ಜನರು ಹತ್ತುವ ಇಳಿಯುವ ಗಜಿಬಿಜಿಯ ಗಲಾಟೆ ಕಡೆ ಕಣ್ಣಾಯಿಸಿದೆ. ಕೆಲವರು ಬೋಗಿಯೊಳಗೆ ತಮ್ಮ ಆಸನ ಹುಡುಕುತ್ತಿದ್ದಾರೆ. ಮತ್ತೆ ಕೆಲವರು ತಮ್ಮ ಲಗೇಜು ಇಡುವ ಭರದಲ್ಲಿದ್ದಾರೆ. ಕೆಲವರ ಬ್ಯಾಗುಗಳನ್ನು ಅಪ್ಪರ್ ಬರ್ತ್‍ನಲ್ಲಿಡುತ್ತಿದ್ದಾರೆ. ಇನ್ನೂ ಕೆಲವರು ಇಡೀ ಮನೆ ಖಾಲಿ ಮಾಡಿ ಬಂದಷ್ಟು ಲಗೇಜ್ ತಂದು ಇಡಲು ಸ್ಥಳವಿಲ್ಲದೆ ಪೇಚಾಡುತ್ತಿದ್ದಾರೆ. ಈ ಎಲ್ಲಾ ಗಲಾಟೆಯ ಮಧ್ಯೆಯೂ ಸೀಬೆಬುಟ್ಟಿ ಹಿಡಿದ ಹುಡುಗಿಯೊಬ್ಬಳು ತೂರಿ ಬಂದಳು. ಅವಳು ಮಾರಲು ತಂದ ಬುಟ್ಟಿಯೊಳಗೆ ಬಿಸಿಲಿಗೆ ಬಾಡಿ […]

ಸ್ವಾತಂತ್ರ್ಯ ಹೋರಾಟವು, ವ್ರತಗಳ ಬಂಧನವು: ಕೆ ಟಿ ಸೋಮಶೇಖರ ಹೊಳಲ್ಕೆರೆ,

    ಈ ಮನುಷ್ಯನಿಗೆ ತಲೆಬಾಗಿ ಹೃದಯಪೂರ್ವಕ ನಮಿಸಬೇಕೆನ್ನಿಸುವುದು ದೇಶದ ಸ್ವಾತಂತ್ರ್ಯ ಹೋರಾಟದ ಮುಂದಾಳು ಆಗಿದ್ದ ಎಂದು ಅಲ್ಲ. ಹೋರಾಡಲು ಆಯ್ದುಕೊಂಡ ಮಾರ್ಗ ಅತ್ಯುನ್ನತವಾದುದು ಆಗಿತ್ತೆಂದು. ಸ್ವಾತಂತ್ರ್ಯ ಎಂದರೆ ನಾವು ಬಯಸಿದಂತೆ ಬದುಕಲು ಸಾಧ್ಯವಾಗುವದು. ಬದುಕಿನ ಮೇಲೆ ಯಾರ, ಯಾವ ಒತ್ತಡವೂ ಇರದೆ ಬದುಕುವುದು. ಯಾರ ಕಟ್ಟುಪಾಡುಗಳಿಗೆ ದೌರ್ಜನ್ಯಕೂ ಒಳಗಾಗದೆ ಬದುಕುವುದು. ಕಟ್ಟುಪಾಡುಗಳೇನಾದರೂ ಹಾಕಿದರೆ, ಹಿಂಸೆ ಮಾಡಿದರೆ ಮಾನವನು ಬದುಕಲು ತೊಂದರೆಯಾಗುತ್ತದೆ.ಕಟ್ಟುಪಾಡುಗಳು, ಹಿಂಸೆ ಹೆಚ್ಚಿದಂತೆಲ್ಲ ಬದುಕಲು ತೊಂದರೆ ಹೆಚ್ಚಿ,ಉಸಿರುಗಟ್ಟಿದಂತಾಗುತ್ತದೆ. ವ್ಯಕ್ತಿ ಸ್ವಾತಂತ್ರ್ಯದ  ಹರಣವಾಗುತ್ತದೆ. ಇದೇ ವಾತಾವರಣ ಮುಂದುವರಿದರೆ, […]

  ‘ಬಿ, ಎಡ್ನಲ್ಲಿ ಒಂದು ದಿನ’: ಯಲ್ಲಪ್ಪ ಹಂದ್ರಾಳ

ನಾಳೆ "ಕುಮಾರಗಂಧರ್ವ ಹಾಲ್ ನಲ್ಲಿ (ಬೆಳಗಾವಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶಕ್ತರು ಭಾಗವಹಿಸಬೇಕು ಮತ್ತು ಆಸಕ್ತರು ಕಾರ್ಯಕ್ರಮವನ್ನು ವೀಕ್ಷಿಸಬೇಕು. ಒಟ್ಟಿನಲ್ಲಿ ಎಲ್ಲರೂ ಅಲ್ಲಿರಬೇಕು'' ಎಂದು ಪ್ರಿನ್ಸಿಪಾಲರಾದ ಶ್ರೀ ಬಿ. ಮಲ್ಲಿಕಾರ್ಜುನ ಸರ್ ಅವರು ಗಂಭೀರವಾಗಿ ಹೇಳಿದಾಗ ರೋಮಾಂಚನವಾಯಿತು. ಏಕೆಂದರೆ ಬಿ. ಎಡ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಅಂದ್ರೆ ಮರುಭೂಮಿಯಲ್ಲಿ ಸಿಗುವ ಓಯಾಸಿಸ್ ಇದ್ದಹಾಗೆ. ಅದೂ ಕೆ. ಡಿ ದೇಶಪಾಂಡೆ ಮತ್ತು ಆನಂದ ಅಪ್ಪುಗೋಳ್(ಧರ್ಮದೇವತೆ, ನಂತರ ಸಂಗೊಳ್ಳಿರಾಯಣ್ಣ ಸಿನೆಮಾ ಖ್ಯಾತಿಯ)ಅವರುಗಳು ನಡೆಸುವ ಕಾರ್ಯಕ್ರಮ. ಸರಿ, […]