ಕಾ೦ಗರುಗಳ ನಾಡಲ್ಲೊ೦ದು ಕಾ೦ಗರೂ ಐಲ್ಯಾ೦ಡ್: ಅರ್ಪಿತ ಮೇಗರವಳ್ಳಿ.

ಮೆಲ್ಬೋರ್ನ್‍ನಲ್ಲಿ ಪ್ರತಿವರ್ಷ  ನವೆ೦ಬರ್ ತಿ೦ಗಳ ಮೊದಲ ಮ೦ಗಳವಾರ ’ಮೆಲ್ಬೋರ್ನ್ ಕಪ್ ಡೆ’ ಇರುತ್ತದೆ. ಆಸ್ಟ್ರೇಲಿಯಾದ ಪ್ರತಿಷ್ಠಿತ ಕುದುರೆ ರೇಸ್ ನೆಡೆಯುವ ಈ ದಿನದ೦ದು ಮೆಲ್ಬೋರ್ನ್‍ನಲ್ಲಿ ಸಾರ್ವಜನಿಕ ರಜೆ ಇರುತ್ತದೆ. ಹೀಗಾಗಿ ಸೋಮವಾರ ರಜೆ ತೆಗೆದುಕೊ೦ಡು ನಾಲ್ಕು ದಿನ ದಕ್ಷಿಣ  ಆಸ್ಟ್ರೇಲಿಯಾದ ಕಡೆ ಪ್ರವಾಸ ಹೋಗಿಬರಲು ಯೋಜನೆ ರೂಪಿಸಿದೆವು. ಮೆಲ್ಬೋರ್ನ್‍ನಿ೦ದ ಸುಮಾರು ೭೨೫ ಕಿ.ಮಿ. ದೂರವಿರುವ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿ ಆಡಿಲೇಡಿಗೆ ಆರು ಜನ ಕನ್ನಡಿಗರ ತ೦ಡದೊ೦ದಿಗೆ ಡ್ರೈವ್ ಮಾಡಿಕೊ೦ಡು ಹೊರಟೆವು. ದಕ್ಷಿಣ ಆಸ್ಟ್ರೇಲಿಯಾದಲ್ಲಿ ಇರುವ ನಾಲ್ಕು ದಿನದಲ್ಲಿ … Read more

ನಿಸರ್ಗದ ಮಡಿಲು ಸೆವೆನ್ ಸಿಸ್ಟರ್ಸ್ ಮತ್ತು ಬ್ರೈಟನ್: ಅರ್ಪಿತಾ ಹರ್ಷ

ಲಂಡನ್ ಎಂದ ತಕ್ಷಣ ಎಲ್ಲರ ಕಣ್ಣಿಗೆ ಕಾಣುವುದು ದೊಡ್ಡ ದೊಡ್ಡ ಬಿಲ್ಡಿಂಗ್,ಒಂದಿಷ್ಟು ಸಣ್ಣ ಪುಟ್ಟ ನದಿ, ಎಲೆಕ್ಟ್ರೋನಿಕ್ ಟ್ರೈನ್,ಸುಂದರ  ಮತ್ತು ಸುಸಜ್ಜಿತವಾದ ಪಾರ್ಕ್ ಮತ್ತು ಹಳೇ ವಿಕ್ಟೋರಿಯನ್ ಕಾಲದ ಮನೆಗಳು.ಕರ್ನಾಟಕದಂತ ಹಸಿರು,ಗದ್ದೆ,ಕೆರೆ,ತೋಟಗಳನ್ನು ನೋಡಿ ಬೆಳೆದವರಿಗೆ ಈ ರೀತಿಯ ಹೈ ಟೆಕ್ ಜೊತೆಗೆ ಹಳೇ ಮನೆಗಳ ನಡುವೆ ಇರುವಾಗ ನಮ್ಮ ಊರಿನ ನೆನಪು ಸದಾ ಕಾಡುತ್ತದೆ.ಆ ಹಸಿರನ್ನು ನೋಡಬೇಕು ಅಲ್ಲಿ ಕುಳಿತು ಊಟ ಮಾಡಬೇಕು,ನಮ್ಮ ನೆಚ್ಚಿನವರೊಂದಿಗೆ ಕುಳಿತು ಒಂದಿಷ್ಟು ಹರಟೆ ಹೊಡೆಯಬೇಕು,ಪ್ರಕೃತಿಯ ಸೊಬಗನ್ನು ಸವಿಯಬೇಕು,ನಿಸರ್ಗದ ಮಡಿಲಲ್ಲಿ ಕುಳಿತು ಒಂದಿಷ್ಟು … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸ (ಕೊನೆಯ ಭಾಗ): ಗುರುಪ್ರಸಾದ ಕುರ್ತಕೋಟಿ

  ಕಾಲಿಮ್ ಫಾಂಗ್ ನಿಂದ ಗ್ಯಾಂಗ್ ಟಾಕ್ ಗೆ ಹೋಗುತ್ತಿದ್ದಾಗ ಮಧ್ಯೆ ದಾರಿಯಲ್ಲಿ ನಮಗರಿವಿಲ್ಲದಂತೆ ಒಮ್ಮೆಲೆ ಬೆಂಗಳೂರಿನ ನೆನಪಾಯಿತು. ಅದಕ್ಕಿದ್ದ ಒಂದೇ ಕಾರಣವೆಂದರೆ… ಈ ಪ್ರವಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅರ್ಧ ಗಂಟೆ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕೊಂಡಿದ್ವಿ! ಅಂತೂ ಪೋಲಿಸರಿಲ್ಲದಿದ್ದರೂ ಹೇಗೋ ಆ ಜಾಮ್ ಕರಗಿ ನಮ್ಮ ಪಯಣ ಮುಂದುವರಿಯಿತು.    ಗ್ಯಾಂಗ್ ಟಾಕ್, ಸಿಕ್ಕಿಂ ಎಂಬ ಪುಟ್ಟ ರಾಜ್ಯದ ರಾಜಧಾನಿ. ಆ ಊರಿಗೆ ಪ್ರವೇಶಿಸುವುದಕ್ಕೆ ಮೊದಲು, ಬಂಗಾಲ ಹಾಗೂ ಸಿಕ್ಕಿಂ ನ ಗಡಿಯಲ್ಲಿ ಅಗಸೆ … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸ (ಭಾಗ 4): ಗುರುಪ್ರಸಾದ ಕುರ್ತಕೋಟಿ

(ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ)          ಅವತ್ತು ಬೆಳಿಗ್ಗೆ ದಾರ್ಜಿಲಿಂಗ್ ಗೆ ವಿದಾಯ ಹೇಳಿ ಕಾಲಿಮ್ ಪಾಂಗ್‍ಗೆ  ನಮ್ಮ ಸವಾರಿ ಸಾಗಿತ್ತು. ಮಾರ್ಗ ಮಧ್ಯದಲ್ಲಿ ಒಂದು ಅದ್ಭುತ ಜಾಗದಲ್ಲಿ ಟ್ರೆಕ್ಕಿಂಗ್‍ಗೆ ಕರೆದೊಯ್ಯುವುದಾಗಿ ಭರವಸೆ ಕೊಟ್ಟು ನಮ್ಮನ್ನು ಕುತೂಹಲಿಗಳನ್ನಾಗಿರಿಸಿದ್ದ ನಮ್ಮ ನೀ ಮಾ. ನಾವು ಹೊರಟು ಸುಮಾರು ಎರಡು ಗಂಟೆಗಳಾಗಿತ್ತೇನೊ ಲಾಮಾ ಹಟ್ಟಾ ಅನ್ನುವ ಒಂದು ಹಳ್ಳಿಯಲ್ಲಿ ನಮ್ಮ ಗಾಡಿ ನಿಂತಿತು. ಅದು ಮುಖ್ಯ ರಸ್ತೆಯಲ್ಲೇ ಇರುವ ಒಂದು ಹಳ್ಳಿ. ವಿಚಿತ್ರವೆಂದರೆ ಅಲ್ಲಿಂದಲೂ ಕಾಂಚನಜುಂಗಾದ ಮತ್ತೊಂದು … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೩): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಟೈಗರ್ ಹಿಲ್ ನ ಸುರ್ಯೋದಯ ನೋಡಿ ಬಂದು ಒಂಭತ್ತು ಗಂಟೆಗೆಲ್ಲಾ ತಯಾರಾಗಿ ಹೋಟೆಲ್ ಹೊರಗೆ ನಿಂತವರ ಮುಖಗಳು ಲವಲವಿಕೆಯಿಂದ ಕಂಗೊಳಿಸುತ್ತಿದ್ದವು. ಯಾಕಂತೀರಾ? ಬೆಂಗಳೂರು ಬಿಟ್ಟ ಮೇಲೆ ಮೊದಲ ಬಾರಿಗೆ ಎಲ್ಲರಿಗೂ ಸ್ನಾನ ಮಾಡುವ ಅವಕಾಶ ಸಿಕ್ಕಿದ್ದು ಅವತ್ತೇ! ತಾನು ಹೇಳಿದ್ದ ಟೈಮಿಗೆ ನಾವು ಸರಿಯಾಗಿ ಬಂದಿಲ್ಲಾ ಅಂತ ನೀಮಾ ಮುಖ ಸಿಂಡರಿಸಿಕೊಂಡಿದ್ದ. ಮೊದಲೇ ಕೆಂಪಗಿದ್ದವನು ಇನ್ನೂ ಕೆಂಪಾಗಿದ್ದ ಏನೇನೋ ಪ್ರಯತ್ನಗಳನ್ನು ಮಾಡಿ ಅವನ ಮುಖದ ಗಂಟುಗಳನ್ನು ಯಶಸ್ವಿಯಾಗಿ ಬಿಡಿಸಿದೆವು. ನೀ ಮಾ ಮೂಕನಾದರೆ ನಮಗೆ ಮಾಹಿತಿಗಳು … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೨): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಇಷ್ಟು ಬೇಗ ಬೆಳಕಾಯ್ತೆ!? ಒಂದೊಂದು ಸಲ ನಿದ್ದೆ ಸಾಲದಾದಾಗ, ಏಳಲೇಬೇಕಾದ ಅನಿವಾರ್ಯತೆಯಿದ್ದಾಗ ಹಾಗನ್ನಿಸಿಬಿಡುತ್ತದೆ! ಇನ್ನೂ ಹಳೆಯದರಂತೇ ಗೋಚರಿಸುವ ಬಂಗಾಲದ  New Jalpaiguri ಎಂಬ ಊರಿನಲ್ಲಿ ಗಂಟು ಮೂಟೆಗಳೊಂದಿಗೆ ಬೆಳ್ಳಂ ಬೆಳಿಗ್ಗೆ ಟ್ರೇನಿನಿಂದ ಇಳಿದಾಗ, ಇಲ್ಲಿ ಹೊಸ (New) ದೇನಿರಬಹುದು ಅಂತ ಯೋಚಿಸುತ್ತಲೇ ಹೊರಗೆ ಬಂದಾಗ ಎರಡು ಝೈಲೋ ಗಾಡಿಗಳು ಹಾಗೂ ಇಬ್ಬರು ಸಾರಥಿಗಳು ನಮಗಾಗಿ ಕಾಯ್ದಿದ್ದರು. ಒಬ್ಬನ ಹೆಸರು ಸರೋಜ್ ಇನ್ನೊಬ್ಬ ನೀ ಮಾ. ಇಬ್ಬರೂ ನೇಪಾಳಿಗಳು. ನೀ ಮಾ ಅಂದರೆ  ನೇಪಾಳೀ ಭಾಷೆಯಲ್ಲಿ ಸುರ್ಯೋದಯವಂತೆ.  … Read more

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೧): ಗುರುಪ್ರಸಾದ ಕುರ್ತಕೋಟಿ

"ಯಾವುದೆ ಪ್ರವಾಸದಲ್ಲಿ ಅನುಭವಿಸುವ ಅನಂದಕ್ಕಿಂತ ಆ ಪ್ರವಾಸಕ್ಕಾಗಿ ಮಾಡುವ ಸಿಧ್ಧತೆ ಹಾಗೂ ಅದರ ಕಲ್ಪನೆಯಲ್ಲಿ ಸಿಗುವ ಮಜವೇ ಅದ್ಭುತ!" ಅಂತ ನಮ್ಮ ಕೃಷ್ಣ ಮೂರ್ತಿ ಅವರ ಅಂಬೋಣ. ಅದು ನಿಜವೂ ಹೌದು. ಹಾಗೂ ಆ ಮಾತು ಪ್ರವಾಸಕ್ಕಷ್ಟೇ ಸೀಮಿತವಲ್ಲ. ಯಾವುದೇ ವಿಷಯದಲ್ಲೂ ಕಲ್ಪನೆಯಲ್ಲಿರುವ ಖುಷಿಯೇ ಬೇರೆ. ಹೀಗೆ ನಮ್ಮ ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಪರಿಕಲ್ಪನೆ ಶುರುವಾದದ್ದು ಮೂರು ತಿಂಗಳ ಹಿಂದೆ. ಎಲ್ಲೆಲ್ಲಿ ಹೋಗುವುದು, ಏನೇನು ಸಿದ್ಧತೆಗಳು, ಎಲ್ಲಿ ಪ್ಲೇನು, ಎಲ್ಲಿ ಟ್ರೇನು ಅನ್ನುವ ಹಲವಾರು … Read more

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಕೊನೆಯ ಭಾಗ): ಶಿವು ಕೆ.

(ಇಲ್ಲಿಯವರೆಗೆ)  ಮೂರನೇ ದಿನ ಸಂಜೆ ಮತ್ತೆ ದುರಂತೋ ರೈಲಿನಲ್ಲಿ ಹೊರಟು ಹೌರಾ ತಲುಪುವ ಹೊತ್ತಿಗೆ ಸಂಜೆ ಏಳುಗಂಟೆ.  ಹೂಗ್ಲಿ ನದಿಯ ಮೇಲೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಅಲ್ಲಿ ದೊಡ್ದ ದೊಡ್ದ ಬೋಟುಗಳ ವ್ಯವಸ್ಥೆಯಿದೆ.  ನಾವು ಆ ಬೋಟಿನೊಳಗೆ ಸೇರಿಕೊಂಡೆವು. ಬೋಟ್ ನಿದಾನವಾಗಿ ಚಲಿಸುತ್ತಾ ದೊಡ್ದದಾದ ಹೌರ ಬ್ರಿಡ್ಜ್ ಕೆಳಗೆ ಸಾಗುತ್ತಾ…ಅದನ್ನು ದಾಟಿ ಮುಂದೆ ರವಿಂದ್ರ ನಾಥ್ ಠಾಕೂರ್ ಸಮಾಧಿ, ಧಾಟಿಕೊಂಡು ಮುಂದೆ ಸಾಗಿದಾಗ ನಾವೆಲ್ಲ ಬಲಗಡೆಗೆ ಇಳಿದುಕೊಂಡೆವು. ಅಲ್ಲಿಗೆ ನಮ್ಮ ಜೊತೆಯಲ್ಲಿ ಬಂದಿದ್ದ ಪಶ್ವಿಮ … Read more

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 2): ಶಿವು ಕೆ.

(ಇಲ್ಲಿಯವರೆಗೆ) ಮೊದಲ ಭಾರಿಗೆ ಅಲ್ಲಿನ ಲೋಕಲ್ ರೈಲು ನಿಲ್ದಾಣದೊಳಗೆ ಕಾಲಿಟ್ಟಿದ್ದೆ. ಎಷ್ಟೊಂದು ಜನ ಅಂತೀರಿ! ನೂರಾರು ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಸಿದ್ದರಾಗಿ ಬರುವ ರೈಲುಗಾಡಿಗಳಿಗೆ ಕಾಯುತ್ತಿದ್ದರು. ಆ ಕ್ಷಣದಲ್ಲಿ ಮಲ್ಲೇಶ್ವರಂ ರೈಲು ನಿಲ್ದಾಣ ನೆನಪಾಯ್ತು. ಸದಾ ಶಾಂತವಾಗಿರುವ ನಮ್ಮ ಮಲ್ಲೇಶ್ವರಂ ರೈಲು ನಿಲ್ದಾಣವೆಲ್ಲಿ! ಗಿಜಿಗುಟ್ಟುವ ಈ ನಿಲ್ದಾಣವೆಲ್ಲಿ! ಖಂಡಿತ ಹೋಲಿಸಕೊಳ್ಳಬಾರದು ಸುಮ್ಮನೆ ಇಲ್ಲಿನ ದೃಶ್ಯಗಳನ್ನು ಕಣ್ತುಂಬಿಕೊಳ್ಳುತ್ತಾ ಆಸ್ವಾದಿಸಬೇಕೆಂದುಕೊಂಡು ಅಭಿಜಿತ್ ಡೆ ಮತ್ತು ಇತರರೊಂದಿಗೆ ನಾನು ರೈಲು ನಿಲ್ದಾಣದ ಪ್ಲಾಟ್ ಫಾರಂ ಕಡೆಗೆ ನಡೆದೆ. ಆಗಲೇ … Read more

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 1): ಶಿವು ಕೆ.

ಕೊಲ್ಕತ್ತ ವಿಮಾನ ನಿಲ್ದಾಣದ ೩ಎ ಗಾಜಿನ ಬಾಗಿಲಿಂದ ಹೊರಬರುತ್ತಿದ್ದಂತೆ ಸಣ್ಣಗೆ ಮಳೆ.  ನನಗಾಗಿ ಕಾಯುತ್ತಿದ್ದ "ಅಭಿಜಿತ್ ಡೆ" ಹೆಸರಿನ ನನಗಿಂತ ಸ್ವಲ್ಪ ಹೆಚ್ಚೇ ವಯಸ್ಸಿನ, ಹೆಚ್ಚೇ ಗಾತ್ರದ ಮತ್ತು ಜಾಸ್ತಿ ಬೆಳ್ಳಗಿನ ವ್ಯಕ್ತಿಯೊಬ್ಬ, "ಹಾಯ್ ಶಿವುಜೀ, ಕೆಸಾ ಹೇ, ಪ್ಲೇನ್ ನೇ ಕೊಯಿ ಪ್ರಾಬ್ಲಂ ನಂ ತಾ:  ಸಬ್ ಕುಚ್ ಟೀಕ್ ಹೇನಾ," ಎಂದು ನನ್ನನ್ನು ಗಟ್ಟಿಯಾಗಿ ಬಿಗಿದಪ್ಪಿಕೊಂಡನಲ್ಲ, ಅಲ್ಲಿಗೆ ನನ್ನ ಮನಸ್ಸಿನ ಚಿಂತೆಗಳಲ್ಲಿ ಅರ್ಧದಷ್ಟು ದೂರವಾಗಿತ್ತು. ಮೊದಲ ಬಾರಿಗೆ ನನ್ನ ಮಟ್ಟಿಗೆ ತುಂಬಾ  ದೂರದ ಕೊಲ್ಕತ್ತಗೆ … Read more

ಸಂಜಯಂತಿಯಲ್ಲೊಂದು ಸುತ್ತು:ಪ್ರಶಸ್ತಿ ಪಿ

  ಹಿಂಗೇ ಹಿಂದಿನ ಶುಕ್ರವಾರ ಶಿರಸಿಯಲ್ಲೊಂದು ಮದುವೆ. ಆ ಮದುವೆಯ ದಿನ ಶಿರಸಿ ಮಾರಿಕಾಂಬೆಯ ದರ್ಶನ ಪಡೆದು ಹೊರಬಂದಾಗ ಎದುರಿಗೆ ಕಂಡಿದ್ದು ಪ್ರವಾಸೋದ್ಯಮ ಇಲಾಖೆಯ ಬೋರ್‍ಡು. ಹಾಗೇ ಕಣ್ಣಾಡಿಸುತ್ತಿದ್ದಾಗ ಕಂಡಿದ್ದು ಸೋಂದಾ-೨೩ ಕಿ.ಮೀ, ಬನವಾಸಿ-೨೨ ಕಿ.ಮೀ ಅಂತ. ಅರೆ! ಬನವಾಸಿ ಇಷ್ಟು ಹತ್ರವಾ.. ಹಾಗಾದ್ರೆ ಇವತ್ತು ಅಲ್ಲಿಗೆ ಹೋಗೇ ಊರಿಗೆ ಮರಳ್ಬೇಕು ಅಂದ್ಕೊಂಡೆ. ಆದ್ರೆ  ಮದುವೆ ಊಟ ಮುಗಿಸಿದ ಮೇಲೆ ಸೀದಾ ಸಾಗರದ ಬಸ್ಸು ಹತ್ತಿದ್ದಾಯ್ತು, ಬನವಾಸಿ ಮಿಸ್ಸಾಯ್ತು. ಆದರೆ ಸಿಗಬೇಕೆಂದಿದ್ದದ್ದು ಸಿಕ್ಕೇ ಸಿಗುತ್ತೆ ಅಂತಾರೆ ಹಲವರು. … Read more

ಕಿಕ್ಕೇರಿ ಪಂಚಲಿಂಗೇಶ್ವರ ಹಾಗೂ ಹೊಸಹೊಳಲು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ

"ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು ಕರ್ನಾಟವಿದುವೆ ನೃತ್ಯ ಶಿಲ್ಪ ಕಲೆಯ ಬೀಡಿದು…ಅಪಾರ ಕೀರ್ತಿಯೇ" ಕನ್ನಡ ಚಿತ್ರರಂಗದ ಭೀಷ್ಮ ಎಂದೇ ಹೆಸರಾಗಿದ್ದ ಶ್ರೀ ಆರ್. ಎನ್. ನಾಗೇಂದ್ರ ರಾಯರು ದಿಗ್ದರ್ಶಿಸಿದ್ದ ಮಹತ್ವಾಕಾಂಕ್ಷೆಯ ಚಿತ್ರ ವಿಜಯನಗರದ ವೀರಪುತ್ರ ಚಿತ್ರದ ಕುದುರೆ ನಡಿಗೆಯ ತಾಳದ ಜನಪ್ರಿಯ ಗೀತೆ ಕೇಳಿದಾಗೆಲ್ಲ ಕರ್ನಾಟಕದಲ್ಲಿ ಶಿಲ್ಪಕಲೆಯು ಉನ್ನತ ಸ್ಥಾಯಿ ಮುಟ್ಟಿದ್ದ ಹೊಯ್ಸಳ ಅರಸರ ಕಲೆಯು ನೆನಪಿಗೆ ಬರುತ್ತದೆ.   ಡಿಸೆಂಬರ್ ೨೯ನೆ ತಾರೀಕು ಹಾಸನದಿಂದ ಮೈಸೂರಿಗೆ ಹೋಗಬೇಕಿತ್ತು..ಕರುನಾಡಿನ ಎಲ್ಲ ಸ್ಥಳಗಳು ಕೈ ರೇಖೆಯಂತೆ … Read more

ಬೆಟ್ಟದ ಅ೦ಗಳದಲ್ಲೊ೦ದು ದಿನ

ಈ ಬಾರಿಯ ರಜಾ ಮಜಾವನ್ನು ಅನುಭವಿಸಲು ಮಿತ್ರರೆಲ್ಲ ಸೇರಿ ಭೂ ಲೋಕದ ‘ಸ್ವರ್ಗ’ ಕೊಡಗಿಗೆ ಹೋಗುವುದೆ೦ದು ತೀರ್ಮಾನಿಸಿದೆವು. ನಮ್ಮ ಪ್ರವಾಸದ ಮುಖ್ಯ ವೀಕ್ಷಣಾ ತಾಣವಾಗಿ ಆರಿಸಿಕೊ೦ಡದ್ದು ಮುಗಿಲುಪೇಟೆಯೆ೦ದೇ ಖ್ಯಾತಿ ಗಳಿಸಿರುವ ಮಾ೦ದಲಪಟ್ಟಿ ಪರ್ವತ ಸಾಲುಗಳನ್ನು. ಅ೦ತೆಯೇ ನಿಗದಿತ ದಿನಾ೦ಕದ೦ದು ಮು೦ಜಾನೆ ಉಡುಪಿಯಿ೦ದ ಮ೦ಗಳೂರಿಗಾಗಿ ಕೊಡಗಿಗೆ ಹೊರಟೆವು,ಹೊರಟಾಗ ಮು೦ಜಾನೆ ೫ಃ೩೦. ಮು೦ಜಾನೆಯ ಚುಮು ಚುಮು ಚಳಿಯಲ್ಲಿ ಗಾಡಿ ಓಡಿಸುವುದು ತು೦ಬಾ ಮಜವಾಗಿತ್ತು. ನಾನು ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ಸೂರ್ಯೋದಯ ನೊಡಿದ್ದೇ ಅ೦ದು ! ಹಾಗೂ ಸೂರ್ಯ ನನ್ನ … Read more